ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ಹೆಜ್ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪುಟ್ಟರಾಜು (61) ಮೃತ ರೈತ. ಶನಿವಾರ ಮಧ್ಯಾಹ್ನ ತನ್ನ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಏಕಾಏಕಿ ಜೇನುನೊಣ ದಾಳಿ ನಡೆಸಿದ್ದು, ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರ ಕಿರುಚಾಟ, ಚೀರಾಟ ಕೇಳಿ ನೆರವಿಗೆ ಧಾವಿಸಿದ ಪುಟ್ಟರಾಜು ಅವರ ಸಹೋದರ ಬಸವರಾಜು ಹಾಗೂ ಅವರ ಸಂಬಂಧಿ ಮಲ್ಲಿಕಾರ್ಜುನ ಅವರಿಗೂ ಕೂಡ ಹೆಚ್ಚೇನು ದಾಳಿಯಿಂದ ಗಾಯಗೊಂಡಿದ್ದಾರೆ.
ಮೂವರನ್ನು ಪಿರಿಯಾಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಪುಟ್ಟರಾಜು ಮೃತಪಟ್ಟಿದ್ದಾರೆ. ಈ ಕುರಿತು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.