ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲಾ ಹಿರೇಮಠ, ಪುತ್ರ ಶ್ರೀಪಾದಯ್ಯ, ಸಿದ್ದಲಿಂಗಯ್ಯ ತಮ್ಮನ ಪತ್ನಿ ನಿರ್ಮಲಾ ಹಿರೇಮಠ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.