ಸೇನಾ ವಾಹನದಲ್ಲಿ ದಿಢೀರ್ ಬೆಂಕಿ: ನಾಲ್ವರು ಯೋಧರು ಹುತಾತ್ಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಸೇನಾ ವಾಹನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ಪೂಂಚ್ ವಲಯದಲ್ಲಿ ಯೋಧರನ್ನು ಹೊತ್ತು ಸಾಗುತ್ತಿದ್ದ ಸೇನಾ ವಾಹನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದರ ಪರಿಣಾಮ ವಾಹನದಲ್ಲಿದ್ದ ನಾಲ್ವರು ಯೋಧರು ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಸೇನಾ ಪಡೆ ಧಾವಿಸಿದ್ದು ಬೆಂಕಿ ನಂದಿಸಿದೆ. ಪ್ರಕರಣ ದಾಖಲಿಸಿಕೊಂಡು ಇದೀಗ ತನಿಖೆ ನಡೆಸಲಾಗುತ್ತಿದೆ.

ಪ್ರಾಥಾಮಿಕ ಮಾಹಿತಿ ಪ್ರಕಾರ, ಸಿಡಿಲಿನ ಹೊಡೆತಕ್ಕೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್‌, ‘ಯೋಧರ ಸೇವೆ ಮತ್ತು ಬದ್ಧತೆಗೆ ಇಡೀ ದೇಶ ಆಭಾರಿಯಾಗಿದೆ. ಯೋಧರನ್ನು ಕಳೆದುಕೊಂಡ ಕುಟುಂಬಕ್ಕೆ ನಾನು ಸಂತಾಪ ತಿಳಿಸುತ್ತೇನೆ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!