ಹೊಸ ದಿಗಂತ ಆನ್ ಲೈನ್ ಡೆಸ್ಕ್:
ವಿದ್ಯುತ್ ಮೀಟರ್ ಬಾಕ್ಸ್ ಕೊಠಡಿಯಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದ್ದು, 28 ವಿದ್ಯುತ್ ಮೀಟರ್ಗಳು ಸಂಪೂರ್ಣ ನಾಶವಾಗಿರುವ ಘಟನೆ ಮಹಾರಾಷ್ಟ್ರದ ಕಲ್ವಾ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ನಡೆದಿದೆ.
ಶನಿವಾರ ರಾತ್ರಿ 11.15ರ ಸುಮಾರಿಗೆ ಕಟ್ಟಡದ ನೆಲ ಮಹಡಿಯಲ್ಲಿರುವ ವಿದ್ಯುತ್ ಮೀಟರ್ ಕೋಣೆಯಲ್ಲಿ ಬೆಂಕಿ ಕಾಣಿಸಿದೆ. ತಕ್ಷಣವೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ವಿದ್ಯುತ್ ಮತ್ತು ಪೊಲೀಸ್ ಸಿಬ್ಬಂದಿ ಆಗಮಿಸಿ ಒಂದು ಗಂಟೆಯೊಳಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಈ ವೇಳೆ ತಾರಸಿನಲ್ಲಿ ಸಿಲುಕಿದ್ದ 35 ಮಂದಿಯನ್ನು ರಕ್ಷಿಸಲಾಯಿತು. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಠಾಣೆ ಮಹಾನಗರ ಪಾಲಿಕೆಯ ಸ್ಥಳೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಸಂತೋಷ್ ಖದಂ ಅವರು ಮಾಹಿತಿ ನೀಡಿದರು.
ಆಕಸ್ಮಿಕ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.