ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನೆಲಮಂಗಲದ (Nelamangala) ಅಂಚೇಪಾಳ್ಯದ (Anchepalya) ಬಳಿ ಚಲಿಸುತ್ತಿದ್ದ ಕಾರಿನಲ್ಲಿ (Car) ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡ ಪರಿಣಾಮ ಮಾರುತಿ ಎಕ್ಸ್ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೇ ಹೊತ್ತಿ ಉರಿದು ಭಸ್ಮವಾಗಿದೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸುತ್ತಿದ್ದಾರೆ.