ದಿಢೀರ್ ಹೃದಯಾಘಾತ: ಚಲಿಸುತ್ತಿದ್ದ ಬಸ್‍ನಲ್ಲೇ ಪ್ರಾಣಬಿಟ್ಟ ಕಂಡಕ್ಟರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ಚಲಿಸುತ್ತಿದ್ದ ಬಸ್‍ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾಶೀನಾಥ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಏಕಾಏಕಿಯಾಗಿ ಬಸ್‍ನಲ್ಲೇ ಕಂಡಕ್ಟರ್ ಕುಸಿದು ಬಿದ್ದದ್ದಾರೆ. ಇದನ್ನು ನೋಡಿದ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‍ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಲಬುರಗಿಯ ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!