September 26, 2026
Saturday, September 26, 2026
spot_img

ದೆಹಲಿಯಲ್ಲಿ ಇದ್ದಕ್ಕಿದ್ದಂತೆಯೇ ಬಿರುಗಾಳಿ ಸಹಿತ ಮಳೆ: ಮೂರು ವಿಮಾನಗಳು ಜಖಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯಲ್ಲಿ ಇದ್ದಕ್ಕಿದ್ದಂತೆಯೇ ಬಿರುಗಾಳಿ ಸಹಿತ ಜೋರು ಮಳೆ ಸುರಿಯುತ್ತಿದ್ದು, ಮೂರು ಏರ್‌ ಇಂಡಿಯಾ ವಿಮಾನಗಳು ಜಖಂಗೊಂಡಿವೆ.

ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿರುಗಾಳಿಗೆ ರನ್‌ವೇನಲ್ಲಿದ್ದ ಮೂರು ವಿಮಾನಗಳಿಗೆ ಹಾನಿಯಾಗಿದೆ. ರನ್‌ವೇಯಲ್ಲಿ ಏಣಿಗಳು ಹಾಗೂ ಇತರೆ ದೊಡ್ಡ ವಸ್ತುಗಳು ವಿಮಾನಗಳಿಗೆ ಡಿಕ್ಕಿಯಾಗಿದೆ. ಇದರಿಂದಾಗಿ ಮೂರು ವಿಮಾನಗಳು ಜಖಂ ಆಗಿವೆ.

ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಮೂರು ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಎರಡು ವಿಮಾಗಳ ರಿಪೇರಿ ಕೆಲಸ ನಡೆಯುತ್ತಿದೆ. ಆದರೆ ಮೂರನೇ ವಿಮಾನಕ್ಕೆ ತೀವ್ರ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Must Read