Tuesday, August 16, 2022

Latest Posts

ಈ ವಾರವೂ ಬಿಗ್ ಬಾಸ್’ಗೆ ಸುದೀಪ್ ಬರುವುದಿಲ್ಲ! ಆರೋಗ್ಯವಾಗಿದ್ರೂ ಯಾಕೆ ಬರ್ತಿಲ್ಲ ಕಿಚ್ಚ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………. 

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಳೆದ ಎರಡು ವಾರಗಳಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್  ಬಿಗ್ ಬಾಸ್’ನಿಂದ ದೂರ ಉಳಿದಿದ್ದರು. ಆದರೆ ಈ ವಾರ  ಬಂದೇ ಬರುತ್ತೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದರು. ಅಷ್ಟರಲ್ಲಾಗಲೇ ಬಿಗ್ ಬಾಸ್ ಮೇಲು ಕೊರೋನಾ ಕೆಟ್ಟ ದೃಷ್ಟಿ ಬಿದ್ದಿದೆ.

ಹೌದು… ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕೈ ತಪ್ಪಿರುವ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಸಿನಿಮಾ ಸೇರಿದಂತೆ ಕಿರುತೆರೆ ಶೂಟಿಂಗ್ ಗಳಿಗೂ ನಿರ್ಬಂಧ ಹೇರಲಾಗಿದೆ.

ಇದೇ ಕಾರಣಕ್ಕಾಗಿಯೇ ಕಿಚ್ಚ ಸುದೀಪ್ ವೇದಿಕೆ ಮೇಲೆ ನಿಂತೂ ಬಿಗ್ ಬಾಸ್ ಶೋ ನಿರೂಪಣೆ ಮಾಡುವುದು ಸಾಧ್ಯವಾಗುತ್ತಿಲ್ಲ.” ಕಳೆದ ಎರಡು ವಾರಗಳಂತೆಯೇ ಈ ವಾರವೂ ವಿವಿಧ ಚಟುವಟಿಕೆಯ ಮೂಲಕ ನಾಮಿನೇಷನ್ ಆದ ಸದಸ್ಯರನ್ನು ಎಲಿಮಿನೇಟ್ ಮಾಡಲಾಗುತ್ತದೆ” ಎಂದು ಕಲರ್ಸ್ ಕನ್ನಡ ವಾಹಿನಿ ತಿಳಿಸಿದೆ.

ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದು ಕಲರ್ಸ್ ಕನ್ನಡ ವಾಹಿನಿ ಟ್ವೀಟ್ ಮಾಡಿದೆ.

ಈ ವಾರ ಸುದೀಪ್ ನೋಡಬಹುದೆಂದು ಕಾದಿದ್ದ ಬಿಗ್ ಬಾಸ್ ಕಂಟೆಸ್ಟೆಂಟ್’ಗೆ ಈ ವಾರವೂ ನಿರಾಸೆ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss