ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸಂಕಷ್ಟಕ್ಕೆ ನಟ ಕಿಚ್ಚ ಸುದೀಪ್ ಮಿಡಿದಿದ್ದು, ಸೋಂಕಿತರ ಸಹಾಯಕ್ಕೆ ಮುಂದೆ ಬಂದಿದ್ದಾರೆ.
ನಟ ಕಿಚ್ಚ ಸುದೀಪ್ ಬೆಂಗಳೂರಿನ ಆಸ್ಪತ್ರೆಗಳಿಗೆ 300 ಆಕ್ಸಿಜನ್ ಸಿಲಿಂಡರ್ಗಳನ್ನು ಪೂರೈಕೆ ಮಾಡಲು ಮುಂದಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ತಮ್ಮಿಂದ ಆಗುವ ಸಹಾಯವನ್ನು ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆಕ್ಸಿಜನ್, ಬೆಡ್ ಸಿಗದೇ ಸೋಂಕಿತರು ಪ್ರಾಣ ಬಿಡುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹಾಯದ ಹಸ್ತ ಚಾಚುವ ಮೂಲಕ ತೆರೆಯಲ್ಲಿ ಮಾತ್ರವಲ್ಲದೇ ರಿಯಲ್ ಲೈಫ್ ನಲ್ಲೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ.