ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಂತ್ ಅಂಬಾನಿ ವಿವಾಹದಲ್ಲಿ ನಟಿ ನಮ್ರತಾ ಶಿರೋಡ್ಕರ್ ಸುಧಾಮೂರ್ತಿ ಅವರನ್ನು ಭೇಟಿ ಮಾಡಿ ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದಾರೆ.
ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ನಮ್ರತಾ ಶಿರೋಡ್ಕರ್ ಬರೆದುಕೊಂಡಿದ್ದಾರೆ. ಈ ಬುದ್ಧಿವಂತ ಮಹಿಳೆಯ ಬಗ್ಗೆ ತುಂಬಾ ಕೇಳಿದ್ದೆ, ಅವರನ್ನು ಭೇಟಿಯಾದ ನಂತರ ನನ್ನ ನಂಬಿಕೆಯು ನಿಜವಾಯಿತು. ರೋಮಾಂಚಕ, ಜೀವನದಲ್ಲಿ ನೀಡಲು ತುಂಬಾ ಪ್ರೀತಿಯಿದೆ ಎನಿಸಿತು ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಬಣ್ಣಿಸಿದ್ದಾರೆ.
ನನ್ನ ಅಜ್ಜಿ, ಮತ್ತು ಈಗ ನನ್ನ ಪತಿ ಮತ್ತು ಮಗಳ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ವಿನಮ್ರಗೊಳಿಸಿತು. ಈ ನೆನಪುಗಳನ್ನು ಎಂದಿಗೂ ಸ್ಮರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.