ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಮಂತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸೋದರಳಿಯನ ಮದುವೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಆಯೋಜನೆಗೊಂಡಿತ್ತು. ವಿಶೇಷ ಅಂದರೆ ಈ ಮದುವೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಒಡತಿಯರಾದ ಇನ್ಫೋಸಿಸ್ ಸುಧಾಮೂರ್ತಿ, ಸ್ವತಃ ಕಿರಣ್ ಮುಜುಂದಾರ್ ಶಾ ಸೇರಿದಂತೆ ಆಪ್ತರ ಬಳಿಕ ಡೋಲು ಹೊಡೆತಕ್ಕೆ ಭರ್ಜರಿ ಸ್ಪೆಪ್ಸ್ ಹಾಕಿ ಗಮನಸೆಳೆದಿದ್ದಾರೆ.
ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸೋದರಳಿಯ ಎರಿಕ್ ಮಜುಂದಾರ್ ಶಾ ಮದುವೆ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೊಟೆಲ್‌ನಲ್ಲಿ ನಡೆದಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಮದುವೆಯಲ್ಲಿ ಪಾಲ್ಗೊಂಡಿದ್ದರು. ಈ ಮದುವೆ ಕಾರ್ಯಕ್ರಮದಲ್ಲಿ ಇನ್ಪೋಸಿಸ್ ಫೌಂಡೇಷನ್ ಅಧ್ಯಕ್ಷೆ, ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಕೂಡ ಪಾಲ್ಗೊಂಡಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಪಂಜಾಬಿ ಡೋಲ್ ನಾದಕ್ಕೆ ಸುಧಾ ಮೂರ್ತಿ ಹಾಗೂ ಕಿರಣ್ ಮಜುಂದಾರ್ ಶಾ ಡ್ಯಾನ್ಸ್ ಮಾಡಿದ್ದಾರೆ. ಆಪ್ತರ ಜೊತೆ ಹೆಜ್ಜೆ ಹಾಕಿ ಗಮನಸೆಳೆದಿದ್ದಾರೆ.ಡ್ಯಾನ್ಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

