ಇನ್ಫೋಸಿಸ್‌ ಸಂಸ್ಥೆಯ 40ನೇ ಸಂಭ್ರಮಾಚರಣೆಯಲ್ಲಿ ಹೆಜ್ಜೆ ಹಾಕಿದ ಸುಧಾಮೂರ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಇನ್ಫೋಸಿಸ್‌ನ ಸಂಸ್ಥೆಯ 40ನೇ ವರ್ಷದ ಸಂಭ್ರಮಾಚರಣೆ ಯಲ್ಲಿ ಸುಧಾಮೂರ್ತಿಯವರು ಶ್ರೇಯಾ ಘೋಷಾಲ್ ಅವರ ಹಾಡಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಇನ್ಫೋಸಿಸ್ ಸಂಸ್ಥೆಯ 40 ನೇ ವರ್ಷದ ಸಂಭ್ರಮಾಚರಣೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉದ್ಯೋಗಿಗಳು ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು.

ಈ ವೇಳೆ ಗಾಯಕಿ ಶ್ರೇಯಾ ಘೋಷಾಲ್ ಹಾಡಿಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಬಹಳ ಉತ್ಸಾಹದಿಂದ ಹೆಜ್ಜೆ ಹಾಕಿದರು.
ಗಾಯಕಿ ಶ್ರೇಯಾ ಘೋಷಲ್ ಅವರ ಫ್ಯಾನ್ ಪೇಜ್‌ನಿಂದ ಈ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ. 51 ಸೆಕೆಂಡ್‌ಗಳ ಈ ವಿಡಿಯೋ ಟ್ವಿಟ್ಟರ್‌ನಲ್ಲಿ ಪೋಸ್ಟ್ ಆದ ಸ್ವಲ್ಪ ಹೊತ್ತಿನಲ್ಲೇ ಸಾವಿರಾರು ಜನ ವೀಕ್ಷಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!