October 13, 2026
Tuesday, October 13, 2026
spot_img

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ತುರ್ತು ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ 38ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಆರ್.ಬಿ. ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ,

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

Must Read