October 14, 2026
Wednesday, October 14, 2026
spot_img

ರಾತ್ರಿಯಿಡೀ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಲಗಿದ ಕಬ್ಬು ಬೆಳೆಗಾರರು : ವಾಹನ ಸವಾರರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡಿ ಎಂದು ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದು, ನಿನ್ನೆ ಅಹೋರಾತ್ರಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಿದ್ದಾರೆ.

ಪ್ರತೀ ಟನ್‌ ಕಬ್ಬಿಗೆ ಕನಿಷ್ಠ 5,500 ರೂ. ದರ ನಿಗದಿ, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಳ, ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಖರೀದಿ ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಲು ಪಟ್ಟುಹಿಡಿದು ರಾಜ್ಯದ ಪ್ರಮುಖ ಹೆದ್ದಾರಿಗಳನ್ನುಬಂದ್ ಮಾಡಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ರೈತರ ಹೆದ್ದಾರಿ ತಡೆ ಪ್ರತಿಭಟನೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ರಸ್ತೆಗಳಲ್ಲಿಯೇ ಅಡುಗೆ ಮಾಡಿ, ಊಟ ಮಾಡಿ ನಂತರ ಅಲ್ಲಿಯೇ ಮಲಗಿದ್ದಾರೆ. ಬೆಳಗಾವಿ ಹಾಗೂ ಧಾರವಾಡದಲ್ಲಿ ರೈತರು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಧರಣಿ ನಡೆಸಿದ್ದಾರೆ. ಪ್ರಯಾಣಿಕರು, ರೋಗಿಗಳು ಹಾಗೂ ಸರಕು ಸಾಗಣೆ ವಾಹನಗಳ ಚಾಲಕರು ರಸ್ತೆಯಲ್ಲಿಯೇ ಸಿಲುಕಿ ತೀವ್ರ ಸಮಸ್ಯೆ ಅನುಭವಿಸಿದ್ದಾರೆ.

ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ದರ ಘೋಷಿಸದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಿ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡುವುದಾಗಿ ರೈತ ಸಂಘಟನೆಗಳು ಕಟುವಾಗಿ ಎಚ್ಚರಿಸಿವೆ. ಈ ಬಗ್ಗೆ ಸರ್ಕಾರದ ನಿಲುವೇನು? ಕಾದುನೋಡಬೇಕಿದೆ!

Must Read