November 6, 2026
Friday, November 6, 2026
spot_img

ನಿಲ್ಲದ ಕಬ್ಬು ಬೆಳೆಗಾರರ ಹೋರಾಟ : ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ಮತ್ತೂ ಮುಂದುವರಿದಿದ್ದು, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌ ಅವರ ನೃತೃತ್ವದಲ್ಲಿ ಸಾವಿರಾರು ರೈತರು ಇಂದು ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ.

ಬೆಳಗಾವಿಯಲ್ಲಿ ನಿಗದಿಪಡಿಸಿದ ಕಬ್ಬಿನ ದರವನ್ನು ರೈತರು ವಿರೋಧಿಸಿದ್ದಾರೆ. ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಿಲ್ಲ. ನ್ಯಾಯಯುತ ಎಸ್‌ಪಿ ದರ ಹಾಗೂ ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರವನ್ನು ಹೆಚ್ಚು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದರ ಜೊತೆಗೆ ಸಂಪೂರ್ಣ ಸಾಲಮನ್ನಾ ಮಾಡಬೇಕು ಹಾಗೂ ಎಕರೆಗೆ ₹25,000 ಬರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಕಬ್ಬು ಬೆಳೆಗಾರರು ಪ್ರತಿ ಟನ್‌ ಕಬ್ಬಿಗೆ ₹5,500 ವರೆಗೆ ಹಾಗೂ ಲಾಭಾಂಶ ಹಂಚಿಕೆಗೆ ಆಗ್ರಹಿಸಿ ಬೆಳಗಾವಿ, ಬೀದರ್‌, ಧಾರವಾಡ, ವಿಜಯಪುರ ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ.

Must Read