ಸುಹಾಸ್ ಹತ್ಯೆ: ಮಂಗಳೂರಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಭೇಟಿ, ಹಂತಕರ ಶೀಘ್ರ ಬಂಧನ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ಗುರುವಾರ ರಾತ್ರಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ಶಾಂತಿ ಕಾಯ್ದುಕೊಳ್ಳಬೇಕು, ಸಾರ್ವಜನಿಕ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!