ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ಗುರುವಾರ ರಾತ್ರಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ಶಾಂತಿ ಕಾಯ್ದುಕೊಳ್ಳಬೇಕು, ಸಾರ್ವಜನಿಕ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡರು.