ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ಗುರುವಾರ ರಾತ್ರಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಬಂದೋಬಸ್ತ್ಗೆ ಸಂಬಂಧಿಸಿದಂತೆ, 22 ಕೆಎಸ್ಆರ್ಪಿ ತುಕಡಿಗಳು, 1,000 ಪೊಲೀಸ್ ಅಧಿಕಾರಿಗಳು ಮತ್ತು ಐದು ಎಸ್ಪಿ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಎಲ್ಲೂ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ವ್ಯಾಪಕ ಎಚ್ಚರಿಕೆ ತೆಗೆದುಕೊಂಡಿದೆ.