ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿನ 14 ಕಡೆ ಎನ್‌ಐಎ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ (NIA Raid) ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.‌

ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು‌. ಹತ್ಯೆ ಮಾಡಿದ ಮತ್ತು ಹತ್ಯೆಗೆ ಸಹಕರಿಸಿದವರು ಸೇರಿದಂತೆ 12‌ ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್​ಐಎ ಹೆಗಲಿಗೆ ನೀಡಿತ್ತು.

ಜೂನ್ 1ರಂದು ರಾತ್ರಿ 8.30ಕ್ಕೆ ಮಂಗಳೂರು ಹೊರವಲಯದ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!