Monday, August 8, 2022

Latest Posts

ಕೊರೋನಾ ಬಂದಿರಬಹುದು ಎಂಬ ಆತಂಕದಿoದ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..

ಹೊಸದಿಗಂತ ವರದಿ,ಮೈಸೂರು:

ತನಗೆ ಕೊರೋನಾ ಸೋಂಕು ತಗುಲಿರಬಹುದು ಎಂದು ಆತಂಕಗೊoಡ ವೃದ್ಧೆಯೊಬ್ಬರು ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು, ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮುನೇಶ್ವರನಗರದ ನಿವಾಸಿ ಮಹದೇವಮ್ಮ (75) ಆತ್ಮಹತ್ಯೆ ಮಾಡಿಕೊಂಡವರು. ಇವರು ಆರೋಗ್ಯ ಸರಿ ಇಲ್ಲದ ಕಾರಣ ಪಕ್ಕದ ಬೀದಿಯಲ್ಲಿ ಇರುವ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರು. ಮತ್ತೆ ತಪಾಸಣೆಗೆ ಬರುವಾಗ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕು ಎಂದು ವೈದ್ಯರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತನಗೆ ಕೊರೋನಾ ಬಂದಿರಬಹುದು ಎಂದು ಅನುಮಾನದಿಂದ ಆತಂಕಗೊoಡು, ಮನೆಯಲ್ಲಿ ತನ್ನ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಈ ಸಂಬoಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss