ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ರಾಜಧಾನಿ ತರ್ಲೈ ಪ್ರದೇಶದ ಇಮಾಮ್‌ಬರ್ಗಾ ಕಸ್ರ್-ಎ-ಖದೀಜತುಲ್ ಕುಬ್ರಾದಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 31 ಮಂದಿ ಸಾವಿಗೀಡಾಗಿದ್ದಾರೆ.
ಸ್ಫೋಟದ ತೀವ್ರತೆಗೆ 31 ಜನ ಮೃತಪಟ್ಟಿದ್ದು, 169ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ . ಗಾಯಾಳುಗಳನ್ನು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಮತ್ತು ಪಾಲಿಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಪಾಕಿಸ್ತಾನಿ ಪಡೆಗಳು ಬಲೂಚಿಸ್ತಾನ ಪ್ರಾಂತ್ಯದಲ್ಲಿ ರದ್ದ್-ಉಲ್-ಫಿಟ್ನಾ-1 ಎಂಬ ಬೃಹತ್ ಕಾರ್ಯಾಚರಣೆ ವೇಳೆಯೇ ಇಸ್ಲಾಮಾಬಾದ್‌ನಲ್ಲಿ ಈ ದಾಳಿ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಈ ದಾಳಿಯನ್ನು ಖಂಡಿಸಿದ್ದಾರೆ.



