ಶಾಲಾ ಬಸ್‌ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ : ನಾಲ್ವರು ಮಕ್ಕಳು ಸಾವು, 38 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಾಲಾ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಶಾಲಾ ಬಸ್​ಗೆ ಬಾಂಬ್​ ಇರಿಸಿದ್ದ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸಜೀವ ದಹನವಾಗಿದ್ದಾರೆ.

30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಖುಜ್ದಾರ್ ಜಿಲ್ಲೆಯಲ್ಲಿ ಬಸ್​ವೊಂದು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ದಾಳಿ ನಡೆದಿದೆ. ಎಂದು ಸ್ಥಳೀಯ ಉಪ ಆಯುಕ್ತ ಯಾಸಿರ್ ಇಕ್ಬಾಲ್ ತಿಳಿಸಿದ್ದಾರೆ.

ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜವಾಗಿದೆ.

ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಕ್ಕಳ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ಮೃಗಗಳು ಎಂದು ಕರೆದಿದ್ದಾರೆ. ಮುಗ್ದ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಸಂಪೂರ್ಣ ಅನಾಗರಿಕತೆಯ ಕೃತ್ಯ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!