ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರು ನಡೆಸಿರುವ ಆತ್ಮಾಹುತಿ ದಾಳಿಯಲ್ಲಿ 13 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಈ ಬಗ್ಗೆ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ ವಜೀರಿಸ್ತಾನ್ ಜಿಲ್ಲೆಯ ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ಮಾತನಾಡಿದ್ದು, ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಡಿಕ್ಕಿ ಹೊಡೆದಿದ್ದಾನೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವನ್ನಪ್ಪಿದ್ದಾರೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನ ತಾಲಿಬಾನ್ನ ಒಂದು ಬಣವಾದ ಹಫೀಜ್ ಗುಲ್ ಬಹದ್ದೂರ್ ಸಶಸ್ತ್ರ ಗುಂಪಿನ ಆತ್ಮಹತ್ಯಾ ಬಾಂಬರ್ ವಿಭಾಗವು ಈ ದಾಳಿಯ ಹೊಣೆ ಹೊತ್ತುಕೊಂಡಿದೆ.