Thursday, December 8, 2022

Latest Posts

ಕಾಬೂಲ್ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ, 19 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ.

ಕಾಬೂಲ್‌ನಲ್ಲಿ ದಷ್ಟಿ ಬರ್ಜಿ ನೆರೆಹೊರೆಯಲ್ಲಿದ್ದ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ 27 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್ ಪೊಲೀಸ್ ಮುಖ್ಯಸ್ಥರ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. ದಾಳಿಯ ಹೊಣೆಯನ್ನು ಈವರೆಗೂ ಯಾರೂ ಒಪ್ಪಿಕೊಂಡಿಲ್ಲ.

ಸಂಸ್ಥೆಯೊಳಗೆ ಸ್ಫೋಟ ಸಂಭವಿಸಿದ್ದು, 19 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಅಮಾಯಕರು ಪ್ರಾಣಬಿಟ್ಟಿರುವುದಕ್ಕೆ ಸಂತಾಪ ಸೂಚಿಸುತ್ತೇವೆ ಎಂದು ಖಾಲಿದ್ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!