Tuesday, August 16, 2022

Latest Posts

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೂವರು ಅರೆಸೇನಾ ಸಿಬ್ಬಂದಿ ಬಲಿ, 20 ನಾಗರಿಕರಿಗೆ ಗಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಾಕಿಸ್ತಾನದ ಕ್ವೆಟಾದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಅರೆಸೇನಾಪಡೆಯ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.
ಅಫ್ಘಾನಿಸ್ಥಾನದ ಗಡಿಯಲ್ಲಿರುವ ಮಿಯಾನ್ ನಲ್ಲಿ ವ್ಯಕ್ತಿಯೊಬ್ಬ ಬೈಕ್ ನಲ್ಲಿ ಬಂದು ತನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ದಾಳಿಯಿಂದ ಮೂರು ಅರೆ ಸೇನಾ ಸಿಬ್ಬಂದಿ ಮೃತಪಟ್ಟಿದ್ದು, 20 ಜನ ನಾಗರಿಕರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಫ್ರಾಂಟಿಯರ್ ಕಾನ್ ಸ್ಟಾಬ್ಯುಲರಿ ಗಾರ್ಡ್ ಗಳನ್ನು ಗುರಿಯಾಗಿಸಿಕೊಂಡು ಈ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss