ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 20ಕ್ಕೂ ಅಧಿಕ ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಫಘಾನಿಸ್ತಾನದ. ಕಾಬೂಲ್‌ನಲ್ಲಿರುವ ವಿದೇಶಾಂಗ ಸಚಿವಾಲಯದ ಬಳಿಯೇ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಕಾಲಮಾನದ ಪ್ರಕಾರ ಸಂಜೆ 4 ಗಂಟೆ ಸುಮಾರಿಗೆ ವಿದೇಶಾಂಗ ಸಚಿವಾಲಯದ ಬಳಿ ವ್ಯಕ್ತಿಯೊಬ್ಬ ಸುಧಾರಿತ ಸ್ಫೋಟಕ ಸಾಧನಗಳನ್ನು (IED) ಸ್ಫೋಟಿಸಿಕೊಂಡಿದ್ದಾನೆ. ಇದರಿಂದಾಗಿ 20ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆತ್ಮಾಹುತಿ ದಾಳಿಕೋರನು ಸಚಿವಾಲಯ ಪ್ರವೇಶಿಸಲು ಯತ್ನಿಸಿದ್ದ, ಆದರೆ, ಅದು ಫಲಿಸಲಿಲ್ಲ. ಇಲ್ಲದಿದ್ದರೆ, ಇಡೀ ಸಚಿವಾಲಯವನ್ನೇ ಉಡಾಯಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆದಾಗ್ಯೂ, ಯಾವುದೇ ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!