ಬೆಳೆ ನಾಶಕ್ಕೆ ಸೂಕ್ತ ಪರಿಹಾರ: ಯಡಿಯೂರಪ್ಪ

ಹೊಸದಿಗಂತ ವರದಿ, ಚಿತ್ರದುರ್ಗ:

ದೇಶಾದ್ಯಂತ ರೈತರು ಕಟ್ಟಿದ 26 ಸಾವಿರ ಕೋಟಿ ಬೆಳೆ ವಿಮೆಗೆ 1‌ಲಕ್ಷ ಕೋಟಿ ಪರಿಹಾರ ನೀಡಲಾಗಿದೆ. ಸರ್ಕಾರ ನೀರಾವರಿಗೆ ಆಧ್ಯತೆ ನೀಡಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ ಶನಿವಾರ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಮೂವತ್ತನೆಯ ಶ್ರದ್ದಾಂಜಲಿ ಸಮಾರಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಉತ್ತಮ ಮೆಳೆಯಾಗಿದೆ. ಕೆರೆ ಕಟ್ಟೆ ಜಲಾಶಯಗಳು ತುಂಬಿವೆ. ಕೆಲವು ಭಾಗದಲ್ಲಿ ಅತಿವೃಷ್ಠಿಯಿಂದ ಬೆಳೆ ನಾಶವಾಗಿದೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ ಎಂದು ತಿಳಿಸಿದರು.

ಪೂಜ್ಯರ ಅಪೇಕ್ಷೆಯಂತೆ ಭರಮಸಾಗರ ಏತ ನೀರಾವರಿಗೆ 565 ಕೋಟಿ ರೂಪಾಯಿ, ಹಾಗೂ ಜಗಳೂರು ಏತ ನೀರಾವರಿ ಯೋಜನೆಗೆ 725 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರೈತರು ಸ್ವಾಭಿಮಾನದಿಂದ ಬದಕಲು ಅವಕಾಶ ಕಲ್ಲಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಭಾಗ್ಯ ಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೇನೆ. ಹಾಲು ಉತ್ಪಾದಕ ರೈತರಿಗೆ ಹಣಕಾಸಿನ ನೆರವು ನೀಡಲಾಗಿದೆ. ರೈತರ ಜ್ವಲಂತ ಸಮಸ್ಯೆಗಳಿಗೆ ಒಂದು ಕ್ಷಣ ತಡಮಾಡದೆ ಪರಿಹಾರ ಒದಗಿಸಲಾಗಿದೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಪ್ರಯತ್ನಿಸಲಾಗುತ್ತಿದೆ. ರಾಜ್ಯದ ರೈತ ಸಮುದಾಯಕ್ಕೆ ಸಲವತ್ತು ನೀಡಲಾಗಿದೆ ಎಂದರು.

ಹಿಂದಿನ ಗುರುಗಳು ಶಿಕಾರಿಪುರದ ಶಿವನಪಾದಕ್ಕೆ ದರ್ಶನ ಬರುತ್ತಿದ್ದರು. ಆಧುನಿಕ ಜಗತ್ತಿನಲ್ಲಿ ಭಾರತ ಮುಂದುವರಿಯಲು ಎಲ್ಲಾ ಜಗದ್ಗುರಗಳು ಬೋಧಿಸಿದ ಸಂಸ್ಕೃತಿ ಕಾರಣ. ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳು 1947ರಲ್ಲಿ ಸಿರಿಗರೆಯಲ್ಲಿ ಹೈಸ್ಕೂಲ್ ಸ್ಥಾಪನೆ ಮಾಡಿದ್ದಾರೆ. ಭಾವ್ಯಕತೆ ಹಾಗೂ ಮಾನವೀಯತೆ ಭೋಧಿಸಿದ್ದಾರೆ. ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ . ರೈತರು ಸ್ವಾವಲಂಭಿಯಾಗಲು ಅವಕಾಶ ಕಲ್ಪಿಸಿದ್ದಾರೆ. ಶಿಕ್ಷಣ ಹಾಗೂ ಆಶ್ರಯ ನೀಡುವಲ್ಲಿ ಮಠಗಳ ಕೊಡಿಗೆ ಅಪಾರ.

ಮುಖ್ಯಮಂತ್ರಿಯಾಗಿ ಇದ್ದ ಸಮಯದಲ್ಲಿ ವೀರಶೈವ ಅಭಿವೃದ್ಧಿ ಮಂಡಳಿ ಸ್ಥಾಪಿಸಿ 500 ಕೋಟಿ ಅನುದಾನ ನೀಡಿದ್ದೆ. ಅತಿವೃಷ್ಠಿ ಹಾಗೂ ಕೊವಿಡ್ ನಡುವೆಯು ನೀರಾವರಿ ಯೋಜನೆ ಹಣ ಹಣ ಮೀಸಲಿರಿಸಿದೆ. ರಣಗಟ್ಟ ನೀರಾವರಿ ಯೋಜನೆಗಳ ಮೂಲಕ ಕಡೂರು ಕೆರೆಗೆ ನೀರು ತುಂಬಿಸಲಾಗಿದೆ. ಸರ್ಕಾರ ರೈತರ ಸಾಲಕ್ಕೆ ಆಸ್ತಿ ಮನೆಗಳನ್ನು ಜಫ್ತಿಗೆ ನಿಷೇಧಕ್ಕೆ ಕಾನೂನು ತರಲು ಪ್ರಯತ್ನಿಸಲಾಗುವುದು ಎಂದರು.

ಅನ್ನದಾಸೋಹ ಹಾಗೂ ಜ್ಞಾನದಾಸೋಹಕ್ಕೆ ಪ್ರಾಮುಖ್ಯತೆ ನೀಡಿದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತೇನೆ ಎಂದು ಹೇಳಿದರು.

ಸಾಧು ಸದ್ಧರ್ಮ ವೀರಶೈವ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಗುರುವಂದನೆ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು‌.

ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!