ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾಗಿ ಇಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಕಾರ ನೀಡಿದ ವಕೀಲರಿಗೆ ನಾನು ಅಭಿನಂದನೆ ಸಲ್ಲಿಸುವೆ. ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮಾಧ್ಯಮಗಳಿಗೆ ಪತ್ರಿಕ್ರಿಯೆ ನೀಡಿದ್ದಾರೆ.
‘ಮಾಸ್ಕ್‌ಮ್ಯಾನ್’ ಬಂಧನ ವಿಚಾರದ ಬಗ್ಗೆ ನನಗೆ ತಿಳಿದಿಲ್ಲ. ಸುಜಾತ ಭಟ್ ಅವರು ನಮ್ಮ ಹೋರಾಟದಲ್ಲಿಯೇ ಇಲ್ಲ. ಹಾಗಾಗಿ ಸುಜಾತ ಭಟ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ನಮ್ಮನ್ನು ಯಾರು ಕೂಡ ದಿಕ್ಕು ತಪ್ಪಿಸುವುದಕ್ಕೆ ಸಾಧ್ಯವಿಲ್ಲ ಎಂದು ತಿಮರೋಡಿ ಹೇಳಿದ್ದಾರೆ.