ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿ ಪೊಲೀಸರು ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದಾರೆ. ಸೋಮವಾರ ಬೆಳಗ್ಗೆ 11:00 ಗಂಟೆಗೆ ಆರ್ಥಿಕ ಅಪರಾಧ ವಿಭಾಗದ ಮುಂದೆ ಹಾಜರಾಗುವಂತೆ ಅವರನ್ನು ಕೇಳಲಾಗಿದೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ತನಿಖೆಗೆ ಹಾಜರಾಗಿದ್ದರು. ಇವರನ್ನು ಸುಮಾರು ಎಂಟು ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆಕೆಯೊಂದಿಗೆ ಪಿಂಕಿ ಇರಾನಿ ಕೂಡ ಇದ್ದಳು.

ವಿವಿಧ ತನಿಖಾ ಸಂಸ್ಥೆಗಳಿಂದ ಸುಮಾರು 30 ಪ್ರಕರಣಗಳಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದು, ಉದ್ಯಮಿಯೊಬ್ಬರ ಪತ್ನಿಯನ್ನು ಸುಲಿಗೆ ಮಾಡಿದ ಆರೋಪ ಹೊತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!