ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್​​ ಸುಖಬೀರ್ ಸಿಂಗ್ ಸಂಧು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!