ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿರೋಮಣಿ ಅಕಾಲಿದಳ(ಎಸ್‌ಎಡಿ) ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
SAD ಅಧ್ಯಕ್ಷ ಎಸ್ ಸುಖ್ಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಪಕ್ಷದ ವಕ್ತಾರ ಡಾ. ದಲ್ಜೀತ್ ಸಿಂಗ್ ಚೀಮಾ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಕ್ಕಾಗಿ ಮತ್ತು ಅಧಿಕಾರವಧಿಯುದ್ದಕೂ ಬೆಂಬಲ, ಸಹಕಾರ ನೀಡಿದ ಪಕ್ಷದ ನಾಯಕರು ಕಾರ್ಯಕರ್ತರಿಗೆ ಬಾದಲ್ ಧನ್ಯವಾದ ಹೇಳಿದ್ದಾರೆ ಎಂದು ಚೀಮಾ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 24 ರಂದು, ಅಕಾಲ್ ತಖ್ತ್ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಉಪಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಸೇರಿದಂತೆ ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಿತು.