October 16, 2026
Friday, October 16, 2026
spot_img

ಸುಮಲತಾ ಅಂಬರೀಶ್‌ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನೇ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದು, ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕಿ ಸುಮಲತಾ ಅಂಬರೀಶ್ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ರಾಜ್ಯಸಭೆ ಚುನಾವಣೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರನ್ನು ಪ್ರಸ್ತಾಪ ಮಾಡದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡ ಅವರ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಖಾತೆ ಹಂಚಿಕೆ ಸವಾಲಾಗಿ ಪರಿಣಮಿಸಿದೆ ಎಂದು ವ್ಯಂಗ್ಯವಾಡಿದರು.

Must Read