BREAKING | ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ, ಯಾವ ಪಕ್ಷಕ್ಕೆ ಸೇರಿದ್ರು ಸುಮಲತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕಡೆಯ ಹಂತದಲ್ಲಿ ಟಿಕೆಟ್‌ ಕೈ ತಪ್ಪಿದ್ದರಿಂದ ಸುಮಲತಾ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದು ಜನ ಊಹಿಸಿದ್ದರು.

ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ದು ಇದೇ ಮಂಡ್ಯ ಜನತೆ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ನಾನು ಋಣಿಯಾಗಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!