March 25, 2026
Wednesday, March 25, 2026
spot_img

WEATHER | ರಾಜ್ಯದಲ್ಲಿ ಬೇಸಿಗೆ ಜತೆ ಮಳೆ, ಮಲೆನಾಡು ಭಾಗದಲ್ಲಿ ಇಂದು ಜೋರು ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಹಾಸನ, ಚಿಕ್ಕಮಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !