ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣ ಎಂಟ್ರಿ: ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣ ಎಂಟ್ರಿ ಕೊಟ್ಟಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಶುಕ್ರವಾರ ಬೆಂಗಳೂರು ನಗರದ ಕೆ.ಆರ್​.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.

ಇತ್ತ ರಾಜ್ಯಾದ್ಯಂತ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು, ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ತುಂತುರು ಮಳೆ, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!