March 15, 2026
Sunday, March 15, 2026
spot_img

WEATHER | ರಾಜ್ಯದಲ್ಲಿ ನಿಧಾನಕ್ಕೆ ಬೇಸಿಗೆ ಅನುಭವ ಶುರು, ಬೆಂಗಳೂರಿಗರಿಗೆ ಮಾತ್ರ ಬೆಳಗ್ಗೆ-ಸಂಜೆ ಚಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನಕ್ಕೆ ಕುಗ್ಗುತ್ತಿದೆ. ಬೆಂಗಳೂರಿನಲ್ಲಿ ಬೆಳಗ್ಗೆ, ಸಂಜೆ ಹಾಗೂ ರಾತ್ರಿ ಮಾತ್ರ ಚಳಿಯ ವಾತಾವರಣ ಇದೆ.

ಬೆಳಗ್ಗೆ ಒಂಬತ್ತು ಗಂಟೆ ನಂತರ ಬಿಸಿಲು ಹೆಚ್ಚಾಗುತ್ತಿದ್ದು, ಮಧ್ಯಾಹ್ನದ ನಂತರ ನೆತ್ತಿ ಸುಡುವ ಬಿಸಿಲು ಬರುತ್ತಿದ್ದು, ಜನ ಹೈರಾಣಾಗಿದ್ದಾರೆ.

ಇಂದಿನಿಂದ ಮಧ್ಯಾಹ್ನದ ಬಿಸಿಲು ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವೃದ್ಧರು ಹಾಗೂ ಮಕ್ಕಳನ್ನು ಮಧ್ಯಾಹ್ನದ ಬಿಸಿಲಿನಲ್ಲಿ ಹೊರಕ್ಕೆ ಕಳಿಸದಿರುವುದು ಉತ್ತಮ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !