ಬೆಳಗಾವಿಯಲ್ಲಿ ಸಮಾವೇಶ ಸಂಪನ್ನ: ಶಿರಸಿಯತ್ತ ಹೊರಟ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಪ್ರಬಲ ಭಾಷಣ ಮಾಡಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು. ಕಾಂಗ್ರೆಸ್‌ನಲ್ಲಿ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಮತಯಾಚಿಸಿದರು. ಇದೀಗ ಪ್ರಧಾನಿ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಿದ್ದಾರೆ.

ಬೆಳಗಾವಿ ಕಾರ್ಯಕ್ರಮ ಮುಗಿಸಿ ಪ್ರಧಾನಿ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರ ಪರ ಮತಯಾಚನೆ ಮಾಡಲಿದ್ದಾರೆ. ಮಧ್ಯಾಹ್ನ 12:45ಕ್ಕೆ ಶಿರಸಿಗೆ ಆಗಮಿಸುವ ಮೋದಿ, ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!