ನಟಿ ಉರ್ಫಿ ಜಾವೇದ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ನಟಿ ಉರ್ಫಿ ಜಾವೇದ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.

ಸಾರ್ವಜನಿಕವಾಗಿ ಅಶ್ಲೀಲತೆ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ವಾಘ್, ಎರಡು ದಿನಗಳ ಹಿಂದೆಯಷ್ಟೇ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಸಮನ್ಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.

ನಿನ್ನೆಯಷ್ಟೇ ನಟಿ ಉರ್ಫಿ ಜಾವೇದ್ ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದಾರೆ.

ನಟಿ ಉರ್ಫಿ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!