ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಗೆಹ್ಲೋಟ್ ಅವರಿಗೆ ಸಮನ್ಸ್ ಜಾರಿಯಾಗಿದೆ.

ಆಪಾದಿತ ಸಂಜೀವನಿ ಹಗರಣದ ಕುರಿತ ಹೇಳಿಕೆಗಳಿಂದ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಶೇಖಾವತ್ ಅವರು ದೂರು ಸಲ್ಲಿಸಿದ್ದರು. ಹೀಗಾಗಿ, ಆಗಸ್ಟ್ 7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಗೆಹ್ಲೋಟ್ ಅವರಿಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಹರ್ಪ್ರೀತ್ ಸಿಂಗ್ ಸೂಚಿಸಿದ್ದಾರೆ.

ಸಂಜೀವಿನಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯಿಂದ ಸಾವಿರಾರು ಹೂಡಿಕೆದಾರರು ಸುಮಾರು 900 ಕೋಟಿ ರೂಪಾಯಿ ವಂಚಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!