ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahul Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಕಾಂಗ್ರೆಸ್(Congress) ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ (Bengaluru) 42ನೇ ACMM ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಮತ್ತಿತರ ಆರೋಪಗಳನ್ನು ಮಾಡಿತ್ತು. ಅಲ್ಲದೇ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು. ಈ ಜಾಹಿರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು..
ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಜೆ.ಪ್ರೀತ್ ಅವರು, ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿ ಆದೇಶ ಹೊರಡಿಸಿದ್ದಾರೆ.