ಹಸರಂಗನ ಬೌಲಿಂಗ್ ಗೆ ಮಂಕಾದ ಸನ್ ರೈಸರ್ಸ್: ಬೆಂಗಳೂರಿಗೆ 67 ರನ್ ಗಳ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಐಪಿಎಲ್ ಪಂದ್ಯದಲ್ಲಿ ವಾನಿಂದು ಹಸರಂಗ ನ ಮ್ಯಾಜಿಕ್ ಬೌಲಿಂಗ್ ದಾಳಿಯಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 67 ರನ್ ಭರ್ಜರಿ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು 20 ಓವರುಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.
ಗೆಲುವಿನ ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ ಸನ್ ರೈಸರ್ಸ್ ಹೈದರಾಬಾದ್ 19.2 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 125 ರನ್ ಗಳಿಸಿತು.
ಆರ್.ಸಿ.ಬಿ. ಪರವಾಗಿ ಗ್ಲೆನ್ ಮ್ಯಾಕ್ಸ್ವೆಲ್ 1, ವಾನಿಂದು ಹಸರಂಗ 5, ಜೋಸ್ ಏಜಲ್ ವುಡ್ 2, ಹರ್ಷಲ್ ಪಟೇಲ್ 1 ವಿಕೆಟ್ ಪಡೆದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!