Tuesday, June 28, 2022

Latest Posts

ಉಡುಪಿ ಜಿಲ್ಲೆಯಲ್ಲಿ ಭಾನುವಾರ 653 ಮಂದಿಗೆ ಸೋಂಕು, 788 ಮಂದಿ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………

ಹೊಸ ದಿಗಂತ ವರದಿ, ಉಡುಪಿ:

ಸತತ ಮೂರು ದಿನಗಳ ನಂತರ ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೋವಿಡ್‌ನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯ 653 ಮಂದಿಗೆ ಸೋಂಕು ತಗುಲಿದ್ದರೆ, 788 ಮಂದಿ ಒಂದೇ ದಿನ ಚೇತರಿಸಿಕೊಂಡಿದ್ದಾರೆ.
ಭಾನುವಾರ ಕೋವಿಡ್ ಪರೀಕ್ಷೆಗೊಳಪಟ್ಟ 2926 ಜನರಲ್ಲಿ 653 ಮಂದಿಗೆ ಸೋಂಕು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇ. ರಷ್ಟಿದೆ. ಸಮಾಧಾನದ ಸಂಗತಿಯೆಂದರೆ ಸೋಂಕಿನ ಲಕ್ಷಣಗಳಿರುವವರ ಸಂಖ್ಯೆಯೂ ತಗ್ಗಿದೆ. ಸೋಂಕಿತರಲ್ಲಿ 273 ಜನರಿಗೆ ಸೋಂಕಿನ ಲಕ್ಷಣಗಳಿದ್ದರೆ, ಉಳಿದ 380 ಮಂದಿಯಲ್ಲಿ ಲಕ್ಷಣಗಳು ಗೋಚರಿಸಿಲ್ಲ.
ಉಡುಪಿ ತಾಲೂಕಿನಲ್ಲಿ 347, ಕುಂದಾಪುರ ತಾಲೂಕಿನಲ್ಲಿ 200, ಕಾರ್ಕಳ ತಾಲೂಕಿನಲ್ಲಿ 104 ಮತ್ತು ಹೊರ ಜಿಲ್ಲೆಯ ಇಬ್ಬರಿಗೆ ವ್ಯಾಧಿ ಬಾಧಿಸಿದೆ. ಇವರಲ್ಲಿ 22 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿದ್ದಾರೆ. ಹೊಸದಾಗಿ 788 ಮಂದಿ ಸೋಂಕು ಮುಕ್ತರಾಗಿದ್ದಾರೆ. ಈವರೆಗೆ 32,625 ಮಂದಿಗೆ ಸೋಂಕು ತಗುಲಿದ್ದು, ಅವರಲ್ಲಿ 29,916 ಜನರು ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕು ತೀವ್ರಗೊಂಡು 201 ಮಂದಿ ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss