Wednesday, August 17, 2022

Latest Posts

ಉಡುಪಿ ಜಿಲ್ಲೆಯಲ್ಲಿ ಭಾನುವಾರ 962 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಉಡುಪಿ:

ಜಿಲ್ಲೆಯಲ್ಲಿ ಭಾನುವಾರ ಮತ್ತೆ 962 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 40ಸಾವಿರದ ಗಡಿಯತ್ತ ಸಮೀಪಿಸಿದೆ.
ಹೊಸದಾಗಿ ಸೋಂಕು ಖಚಿತಪಟ್ಟವರಲ್ಲಿ 201 ಮಂದಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಉಳಿದ 761 ಜನರಲ್ಲಿ ಲಕ್ಷಣಗಳು ಗೋಚರಿಸಿಲ್ಲ. ಇವರಲ್ಲಿ 384 ಮಂದಿ ಕಾರ್ಕಳ, 309 ಜನ ಉಡುಪಿ ಮತ್ತು 266 ಮಂದಿ ಕುಂದಾಪುರ ತಾಲೂಕಿನವರಾಗಿದ್ದಾರೆ. ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ತಗುಲಿದೆ. ಆಸ್ಪತ್ರೆಗೆ 19 ಜನ ದಾಖಲಾಗಿದ್ದರೆ, ಉಳಿದವರು ಮನೆ ಆರೈಕೆಯಲ್ಲಿದ್ದಾರೆ.
ಮತ್ತೆ ಐದು ಮಂದಿ ಸೋಂಕಿತರ ಸಾವು
ಕೋವಿಡ್ ಸೋಂಕಿನ ಚಿಕಿತ್ಸೆ ಲಕಾರಿಯಾಗದೇ ಮತ್ತೆ ಐವರು ಉಡುಪಿ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ 58ವರ್ಷ ಪ್ರಾಯದ ಇಬ್ಬರು ಮತ್ತು 63ರ ಹರೆಯದ ಒಬ್ಬ ಪುರುಷರು, ಕುಂದಾಪುರ ತಾಲೂಕಿನ 66ವರ್ಷ ವಯಸ್ಸಿನ ಒಬ್ಬ ಪುರುಷ ಮತ್ತು 67ರ ಹರೆಯದ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಬಹು ಅಂಗಾಂಗ ವೈಫಲ್ಯ ಉಂಟಾಗಿತ್ತು. ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಾವು 233ಕ್ಕೆ ಹೆಚ್ಚಳವಾಗಿದೆ.
6ಸಾವಿರಕ್ಕೂ ಅಧಿಕ ಸಕ್ರಿಯ ಸೋಂಕಿತರು
ಭಾನುವಾರ 543 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಇವರೊಂದಿಗೆ ವ್ಯಾಧಿಯಿಂದ ಗುಣಮುಖರಾದವರ ಸಂಖ್ಯೆ 33,273ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈಗ 6372 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈವರೆಗೆ ಒಟ್ಟು 5,28,500 ಮಂದಿಗೆ ಕೋವಿಡ್ ಪರೀಕ್ಷೆ ಮಾಡಿದರೆ, ಅವರಲ್ಲಿ 39,878 ಜನರಿಗೆ ಸೋಂಕು ಖಚಿತವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!