ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯಾದ್ಯಂತ ‘ಸಂಡೇ ಲಾಕ್ ಡೌನ್’: ಪ್ರತಿ ಜಿಲ್ಲೆಯನ್ನು ಸ್ಯಾನಿಟೈಸ್ ಮಾಡಲು ಸರ್ಕಾರ ಸೂಚನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:
ಹೆಚ್ಚುತ್ತಿರುವ ಕೊರೋನಾ ಸೋಂಕನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸರ್ಕಾರ ಸಂಡೇ ಲಾಕ್ ಡೌನ್ ಘೋಷಿಸಿದೆ.
ಭಾನುವಾರ ಇಡೀ ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಲಾಕ್ ಡೌನ್ ವೇಳೆಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಶನಿವಾರ ರಾತ್ರಿ 8ರಿಂದಲೇ ಲಾಕ್ ಡೌನ್ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 7ಕ್ಕೆ ಮುಕ್ತಾಯವಾಗಲಿದೆ.
ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು ಹಾಗೂ ಎಲ್ಲಾ ಜಿಲ್ಲೆಗಳಲ್ಲೂ ಸ್ಯಾನಿಟೈಸೇಷನ್ ಮಾಡಲಾಗುತ್ತದೆ ಎಂದು ಸರ್ಕಾರ ಸೂಚಿಸಿದೆ.
ಕೊರೋನಾ ನಿಯಂತ್ರಣದ ದೃಷ್ಟಿಯಿಂದ ಕಟ್ಟು ನಿಟ್ಟಿನ ಕ್ರಮಕೈಗೊಂಡಿದ್ದು, ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಬಂದರೆ 1000ರೂ. ದಂಡ ವಿಧಿಸಲಾಗುತ್ತದೆ. ಒದಕ್ಕಿಂತ ಹೆಚ್ಚು ಭಾರಿ ನಿಯಮ ಉಲ್ಲಂಘಿಸಿದರೆ 10 ಸಾವಿರ ದಂಡ ವಿಧಿಸಲಾಗುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss