ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗುತ್ತಿದೆ.
ಗ್ರಹಣದ ಅಂಗವಾಗಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಈ ವರ್ಷ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ.
ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ದೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಭಾನುವಾರ ಚಂದ್ರಗ್ರಹಣ : ಸಂಜೆಗೆ ಘಾಟಿ ಸುಬ್ರಹ್ಮಣ್ಯ ದೇಗುಲ ಬಂದ್
