ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆ ಭಾನುವಾರದ ಬಿಡುವು ಪಡದುಕೊಳ್ಳುವ ಎಲ್ಲಾ ಲಕ್ಣಗಳು ಗೋಚರಿಸಿಸುತ್ತಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಮಾತ್ರ ಇಂದು ಹಗುರ ಹಾಗೂ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಕೇಂದ್ರ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಇಂದು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆಗೆ ಮಳೆಯಾಗಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬೆಂಗಳೂರಿನ ಗರಿಷ್ಠ ತಾಪಮಾನ 29 ಡಿಗ್ರಿ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ