ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ, ಎನ್‌ಸಿಪಿ (ಅಜಿತ್ ಬಣ) ನಾಯಕ ಅಜಿತ್ ಪವಾರ್ ಅವರ ಪತ್ನಿ, ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕರಿಸಿದರು.
ಅಜಿತ್ ಪವಾರ್ ಮೃತಪಟ್ಟ 4ನೇ ದಿನ ಸುನೇತ್ರಾ ಪವಾರ್ ಡಿಸಿಎಂ ಪಟ್ಟಕ್ಕೇರಿದ್ದಾರೆ.
ಮಹಾರಾಷ್ಟ್ರದ ಇತಿಹಾಸದಲ್ಲಿ ಉಪಮುಖ್ಯಮಂತ್ರಿ ಪಟ್ಟಕ್ಕೇರಿದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಸುನೇತ್ರಾ ಪವಾರ್ ಪಾತ್ರರಾಗಿದ್ದಾರೆ. 62 ವರ್ಷದ ಸುನೇತ್ರಾ ಮುಂಬೈಯ ಲೋಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸುನೇತ್ರಾ ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ 6 ತಿಂಗಳೊಳಗೆ ಅವರು ವಿಧಾನಸಭೆಗೆ ಆಯ್ಕೆಯಾಗಬೇಕು ಅಥವಾ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಳ್ಳಬೇಕು. ಅಜಿತ್ ಪವಾರ್ ಅವರ ನಿಧನದೊಂದಿಗೆ ಅವರು ಶಾಸಕಾರಿ ಆಯ್ಕೆಯಾದ ಬಾರಾಮತಿ ಸ್ಥಾನ ಖಾಲಿಯಾಗಿದ್ದು, ಸುನೇತ್ರಾ ಅಲ್ಲಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.



