ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಲ್ಲಿನ ಗುಂಪು ಕಲಹದ ನಡುವೆಯೇ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದು, ಇದಕ್ಕೂ ಮುಂಚೆ ಮೌಖಿಕವಾಗಿ ಕೋರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಬಣ ಬಡಿದಾಟ ಕಾರಣವಲ್ಲ, ವೈಯಕ್ತಿಕ ಕಾರಣಕ್ಕೆ ಪ್ರ‍್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ.
ನಿಯಮದಂತೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಾಲ್ಕು ನಿರ್ದೇಶಕರನ್ನು ಮಾತ್ರ ನೇಮಿಸಲಾಗುತ್ತದೆ. ಸದ್ಯ ಈ ಜವಾಬ್ದಾರಿಯನ್ನು ಸುನೀಲ್ ಕುಮಾರ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ ಮತ್ತು ಪಿ.ರಾಜೀವ್ ನಿರ್ವಹಿಸುತ್ತಿದ್ದಾರೆ. ಸುನೀಲ್ ಕುಮಾರ್ ಮತ್ತು ವಿಜಯೇಂದ್ರ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ತಟಸ್ಥ ಸಂಬಂಧ ಹೊಂದಿದ್ದಾರೆ.