spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದತ್ತಾತ್ರೇಯಪೀಠಕ್ಕೆ ಹಿಂದು ಅರ್ಚಕರ ನೇಮಕ: ಹೈಕೋರ್ಟ್ ನಿರ್ದೇಶನ ಸ್ವಾಗತಿಸಿದ ಸಚಿವ ಸುನಿಲ್ ​ಕುಮಾರ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಾಬಾಬುಡನ್​ಗಿರಿಯ ಇನಾಂ ದತ್ತಾತ್ರೇಯಪೀಠದ ಪೂಜಾ ವಿಧಿವಿಧಾನಗಳ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಅವರು, ಹಿಂದುಗಳ ಶ್ರದ್ಧಾಕೇಂದ್ರವಾದ ಚಿಕ್ಕಮಗಳೂರಿನ ಐತಿಹಾಸಿಕ ದತ್ತಾತ್ರೇಯ ಪೀಠ ಕುರಿತಂತೆ ಇವತ್ತು ಘನ ನ್ಯಾಯಾಲಯ ವಿಶೇಷ ತೀರ್ಪು ಕೊಟ್ಟಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಹಿಂದು ಅರ್ಚಕರ ನೇಮಕ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಒಂದು ಸಮಿತಿ ರಚಿಸಿ, ಅದರ ಅಭಿಪ್ರಾಯ ತೆಗೆದುಕೊಂಡು ಅರ್ಚಕರ ನೇಮಕ ಮಾಡಬೇಕು ಅಂತ ಹೇಳಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಹಿಂದೆ ಸುಪ್ರೀಂಕೋರ್ಟ್ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ ಅವತ್ತಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ, ಹಿಂದು ಅರ್ಚಕರ ನೇಮಕಕ್ಕೆ ಬದಲು ಮುಜಾವರ್​ಗಳಿಂದ ಪೂಜೆ ಮುಂದುವರಿಸುವ ಮೂಲಕ ಹಿಂದು ವಿರೋಧಿ ನೀತಿ ಅನುಸರಿಸಿತ್ತು. ಭಕ್ತರ ಭಾವನೆಗಳಿಗೆ ಯಾವುದೇ ಬೆಲೆ ಕೊಡದೆ, ಜನಾಭಿಪ್ರಾಯ ಪಡೆಯದೆ ಇಂಥ ನಿರ್ಣಯ ಮಾಡಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದೆವು. ನ್ಯಾಯಾಲಯವು ಇಂದು ಹಿಂದುಗಳ ಪರವಾಗಿ ತೀರ್ಪು ಕೊಟ್ಟಿದೆ. ಈ ರೀತಿಯ ತೀರ್ಪು ಬಂದಿರುವುದು ದಶಕಗಳ ಕಾಲ ಹೋರಾಟ ಮಾಡಿದ ಎಲ್ಲ ಹೋರಾಟಗಾರರಿಗೆ ಸಿಕ್ಕ ಜಯ. ದತ್ತಪೀಠದಲ್ಲಿ ದತ್ತಾತ್ರೇಯರ ಪಾದುಕೆಗಳಿಗೆ ಪ್ರತಿದಿನ ಪೂಜೆ ಮಾಡುವ ಅವಕಾಶ ಎಲ್ಲರಿಗೂ ಸಿಗಲಿ ಅಂತ ನಾನು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss