Saturday, August 13, 2022

Latest Posts

ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನೀತಾ ಅಣ್ಣಪ್ಪ ಆಯ್ಕೆ

ಹೊಸದಿಗಂತ ವರದಿ, ಶಿವಮೊಗ್ಗ:

ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನೀತಾ ಅಣ್ಣಪ್ಪ ಹಾಗೂ ಉಪಮೇಯರ್ ಆಗಿ ಕೆ.ಶಂಕರ್(ಗನ್ನಿ) ಆಯ್ಕೆಯಾದರು.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬಹುಮತ ಹೊಂದಿರುವ ಬಿಜೆಪಿಯ ಸುನೀತಾ ಅಣ್ಣಪ್ಪ ಮೇಯರ್ ಸ್ಥಾನಕ್ಕೆ ಹಾಗೂ ಕೆ.ಶಂಕರ್ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್‌ನಿಂದ ಹೊಸಮನೆ ವಾರ್ಡ್ ಸದಸ್ಯೆ ರೇಖಾ ರಂಗನಾಥ್ ಮೇಯರ್ ಸ್ಥಾನಕ್ಕೆ ಹಾಗೂ ಉಪಮೇಯರ್ ಸ್ಥಾನಕ್ಕೆ ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದ್ದರು.

ಬುಧವಾರ ನಡೆದ ಚುನಾವಣೆಯಲ್ಲಿ ಕೈ ಎತ್ತುವುದರ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು. ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಸುನೀತಾ ಅಣ್ಣಪ್ಪ ಅವರಿಗೆ 25 ಹಾಗೂ ಕಾಂಗ್ರೆಸ್‌ನ ರೇಖಾ ರಂಗನಾಥ್ ಅವರಿಗೆ 11 ಮತಗಳು ಲಭಿಸಿದವು. ಉಪಮೇಯರ್ ಸ್ಥಾನಕ್ಕೆ ಕೆ.ಶಂಕರ್ ಅವರಿಗೆ 24 ಹಾಗೂ ಆರ್.ಸಿ.ನಾಯ್ಕ್ ಅವರಿಗೆ 11 ಮತಗಳು ಲಭಿಸಿದವು.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ರಾಜ್ ಸಿಂಗ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮೇಯರ್, ಉಪಮೇಯರ್ ಚುನಾವಣಾ ಆಯ್ಕೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಾಲಿಕೆ ಆವರಣಕ್ಕೆ ಪ್ರವೇಶವಿರಲಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss